==="सभी लोगों के लिए अच्छी खबर" -(हिंदी,বাঙালি,తెలుగు,मराठी,தமிழ்,اردو,ગુજરાતી,ಕನ್ನಡ,മലയാളം,ଓଡ଼ିଆ,ਪੰਜਾਬੀ,Ôxômiya,etc.)-संख्या से सर्वाधिक बोली जाने वाली भाषाओं (१-१२) भारत में // (Hindi,,Bengali,Telugu,Marathi,Tamil,Urdu,Gujarati,Kannada,Malayalam,O
«
»
ಕನ್ನಡ ಭಾಷೆ - "ಒಳ್ಳೆಯ ಸುದ್ದಿ".mp4
Manage episode 213799611 series 1329830
Kannada Language - "Good News".mp4 //
ಯೆಶಾಯ 52 - ‘ದೇವರ ದಾಸ’ ಕುರಿತ ನಾಲ್ಕನೆಯ ಗೀತೆ
13ನನ್ನ ದಾಸನಿದೋ, ಕೃತಾರ್ಥ. ಆಗುವವನಾತ ಮಹಿಮಾನ್ವಿತ. ಏರುವನು ಉನ್ನತ ಪದವಿಗಾತ.
14ಆತನ ಮುಖ ನರಮಾನವರ ಮುಖಕ್ಕಿಂತ. ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.
15ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು. ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು. ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.
==============
ಯೆಶಾಯ 53
1ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?
2ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ. ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ,
ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.
3ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು !
ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.
4ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು. ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು. ನಾವು ಭಾವಿಸಿದ್ದಾದರು ಏನು? ಆತ ದೇವರಿಂದ ಬಾಧಿತನೆಂದು. ದಂಡನೆಗೆ ಗುರಿಯಾದವನು, ತಿರಸ್ಕೃತನಾದವನೆಂದು!
5ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ. ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ. ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.
6ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ. ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.
7ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ. ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.
8ಎಳೆದೊಯ್ದರು ಬಂಧನದಿಂದ, ನ್ಯಾಯಸ್ಥಾನದಿಂದ. ಹೌದು, ದೂರಮಾಡಿದರು ಆತನನು ಜೀವಲೋಕದಿಂದ. ವಧೆಯಾದನಾತ ನಮ್ಮ ಜನರ ಪಾಪದ ದೆಸೆಯಿಂದ. ಆದರೂ ಸಮಕಾಲೀನವರಾರು ಮರುಗಲಿಲ್ಲ ಕನಿಕರದಿಂದ.
9ಮಾಡಲಿಲ್ಲ ಆತ ಯಾವ ಪಾಪಕೃತ್ಯ. ಅವನ ಬಾಯಲಿರಲಿಲ್ಲ ವಂಚನೆಯ ವಾಕ್ಯ. ಹೂಣಿದರಾತನನು ಸತ್ತಮೇಲೆ. ದುರುಳರ ಹಾಗೂ ದುಷ್ಕರ್ಮಿಗಳ ನಡುವೆ.
10ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ. ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು. ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.
11ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.
12ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ. ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ. ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ. ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.
67 episoder